ಕರ್ನಾಟಕ ವಿಧಾನ ಪರಿಷತ್ ನೇಮಕಾತಿ 2024 | KLA Recruitment 2024 Notification

Telegram Group Join Now
WhatsApp Group Join Now

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KLA Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

BMTC ಕಂಡಕ್ಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿ 2024

KLA Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ
ವೇತನ ಶ್ರೇಣಿ: 21,400 ರೂ. ರಿಂದ 42,000 ರೂ.
ಹುದ್ದೆಗಳ ಸಂಖ್ಯೆ: 32
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ವಾಹನ ಚಾಲಕರು‌ – 03
ಗ್ರೂಪ್-ಡಿ – 29

ಶೈಕ್ಷಣಿಕ ಅರ್ಹತೆ:
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮೋಟಾರು ಕಾರು ಅಥವಾ ಭಾರಿ ವಾಹನ ಚಾಲನ ಪರವಾನಗಿ ಹೊಂದಿರಬೇಕು.

ವಯೋಮಿತಿ:
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ- 2A, 2B, 3A, 3B, ಅಭ್ಯರ್ಥಿಗಳಿಗೆ: 38 ವರ್ಷ
SC/ ST/ Cat-I ಅಭ್ಯರ್ಥಿಗಳಿಗೆ: 40 ವರ್ಷ

ವೇತನ ಶ್ರೇಣಿ:
ವಾಹನ ಚಾಲಕರು‌ – 21,400 ರೂ. ರಿಂದ 42,000 ರೂ.
ಗ್ರೂಪ್-ಡಿ – 17,000 ರೂ. ರಿಂದ 28,950 ರೂ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ- 2A, 2B, 3A, 3B, ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
SC/ ST/ Cat-I ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಅಂಚೆಯ ಮೂಲಕ ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ: 5079, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು-560 001.ರ ವಿಳಾಸಕ್ಕೆ ಅಥವಾ ಖುದ್ದಾಗಿ ವಿಧಾನ ಸೌಧದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ:216, ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ಇವರಿಗೆ 05-04-2024 ರ ಮೊದಲು ಕಳುಹಿಸಬೇಕು.

KLA Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-04-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: www.kla.kar.nic.in

Leave a Comment