ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BMRCL Recruitment 2025 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ (BMRCL)
- ವೇತನ ಶ್ರೇಣಿ: ರೂ. 1,06,250/-
- ಹುದ್ದೆಗಳ ಸಂಖ್ಯೆ: 01
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಶೈಕ್ಷಣಿಕ ಅರ್ಹತೆ: BMRCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ B.E ಅಥವಾ B.Tech, M.Tech ಪೂರ್ಣಗೊಳಿಸಿರಬೇಕು.ಹುದ್ದೆಯ ವಿವರ:
- ಕನ್ಸಲ್ಟೆಂಟ್ (ಪ್ರಾಜೆಕ್ಟ್ ಮಾನಿಟರಿಂಗ್ & ನೆಟ್‌ವರ್ಕಿಂಗ್): 01
ವಯೋಮಿತಿ: BMRCL ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 32 ವರ್ಷ ಮತ್ತು ಗರಿಷ್ಠ 43 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 04-07-2025ರಿಂದ 17-07-2025ರ ವರೆಗೆ english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಫಾರ್ಮ್‌ನ ಸಹಿ ಮಾಡಿದ ಪ್ರತಿಯನ್ನು ಸಂಬಂಧಿಸಿದ ಸ್ವಯಂ-ಪ್ರಮಾಣೀಕರಿಸಿದ ದಾಖಲೆಗಳೊಂದಿಗೆ 22-07-2025ರ ಒಳಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:
ವಿಳಾಸ: ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್, 3ನೇ ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು – 560027
BMRCL Recruitment 2025 ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-07-2025
- ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-07-2025
- ಸಹಿ ಮಾಡಿದ ಪ್ರಿಂಟೌಟ್ ಸ್ವೀಕರಣೆಯ ಕೊನೆಯ ದಿನಾಂಕ: 22-07-2025
ಪ್ರಮುಖ ಲಿಂಕ್‌ಗಳು:
- ಅಧಿಕೃತ ಅಧಿಸೂಚನೆ: ಡೌನ್ಲೋಡ್
- ಆನ್‌ಲೈನ್ ಅರ್ಜಿ: Apply ಮಾಡಿ
- ಅಧಿಕೃತ ವೆಬ್ ಸೈಟ್: english.bmrc.co.in
ಇತರೆ ಮಾಹಿತಿಗಳು: