ದೆಹಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆ (SSC Recruitment 2025) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SSC Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: ₹21,700 – ₹69,100/-
ಹುದ್ದೆಗಳ ಸಂಖ್ಯೆ: 7,565
ಹುದ್ದೆಗಳ ವಿವರ:
ಕಾನ್ಸ್ಟೇಬಲ್ (ಮಹಿಳೆ) – 2,496
ಕಾನ್ಸ್ಟೇಬಲ್ (ಪುರುಷ) – 5,069
ಶೈಕ್ಷಣಿಕ ಅರ್ಹತೆ:
SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯಸ್ಸು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷ
SC/ST ಅಭ್ಯರ್ಥಿಗಳು: 5 ವರ್ಷ
ಅರ್ಜಿ ಶುಲ್ಕ:
SC/ST/Ex-servicemen: ಶುಲ್ಕವಿಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳು: ₹100/-
ಪಾವತಿಸುವ ವಿಧಾನ: ಆನ್ಲೈನ್
SSC Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-10-2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 22-10-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ಸೈಟ್: ssc.gov.in