ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್ಸ್ಟೇಬಲ್ ನೇಮಕಾತಿ 2023
BMRCL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
ವೇತನ ಶ್ರೇಣಿ: 75,000 ರೂ.
ಹುದ್ದೆಗಳ ಸಂಖ್ಯೆ: 06
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
BMRCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree in Civil Engineering, Degree in Electrical/Mechanical/Electronics & Communication/Computer Science Engineering ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಮ್ಯಾನೇಜರ್ ಸಿವಿಲ್ (CSW) – 2
ಮ್ಯಾನೇಜರ್ (P-Way) – 2
ಮ್ಯಾನೇಜರ್ (ಕಾರ್ಯಾಚರಣೆಗಳು) – 2
ವೇತನ ಶ್ರೇಣಿ:
ಮ್ಯಾನೇಜರ್ – 75,000 ರೂ.
ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 23-11-2023 ರಿಂದ 22-ಡಿಸೆಂಬರ್-2023 ರವರೆಗೆ english.bmrc.co.in ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru-560027 ಇವರಿಗೆ 27-12-2023 ರ ಮೊದಲು ಕಳುಹಿಸಬೇಕು.
BMRCL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-12-2023
ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 27-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: english.bmrc.co.in