ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2023
SSB ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ
BMRCL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
ವೇತನ ಶ್ರೇಣಿ: 63,880 ರೂ. ರಿಂದ 1,22,540 ರೂ.
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in CSE/ECE/EEE/Mechanical/Civil Engineering ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಪ್ರಧಾನ ವ್ಯವಸ್ಥಾಪಕರು – 04
ಉಪ ಪ್ರಧಾನ ವ್ಯವಸ್ಥಾಪಕರು – 06
ವೇತನ ಶ್ರೇಣಿ:
ಪ್ರಧಾನ ವ್ಯವಸ್ಥಾಪಕರು – 1,12,610 ರೂ. ರಿಂದ 1,60,620 ರೂ.
ಉಪ ಪ್ರಧಾನ ವ್ಯವಸ್ಥಾಪಕರು – 63,880 ರೂ. ರಿಂದ 1,22,540 ರೂ.
ವಯೋಮಿತಿ:
ಪ್ರಧಾನ ವ್ಯವಸ್ಥಾಪಕರು – ಗರಿಷ್ಠ 50 ವರ್ಷ
ಉಪ ಪ್ರಧಾನ ವ್ಯವಸ್ಥಾಪಕರು – ಗರಿಷ್ಠ 45 ವರ್ಷ
ಅರ್ಜಿ ಶುಲ್ಕ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 16-11-2023 ರಿಂದ 15-12-2023 ರವರೆಗೆ english.bmrc.co.in ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಆನ್ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru-560027 ಇವರಿಗೆ 20-12-2023 ರ ಮೊದಲು ಕಳುಹಿಸಬೇಕು.
BMRCL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-12-2023
ಹಾರ್ಡ್’ಕಾಫಿ ಸಲ್ಲಿಸಲು ಕೊನೆಯ ದಿನಾಂಕ: 20-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: english.bmrc.co.in