ಕೊಪ್ಪಳ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Koppal Gram Panchayat Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2024
FDA, SDA ಹುದ್ದೆಗಳ ನೇಮಕಾತಿ 2024
Koppal Gram Panchayat Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯತಿ ಕೊಪ್ಪಳ
ವೇತನ ಶ್ರೇಣಿ: 15196.72 ರೂ.
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ: ಕೊಪ್ಪಳ
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಪಂಚಾಯತಿ ಕೊಪ್ಪಳ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಹೊಂದಿರಬೇಕು.
ವಯೋಮಿತಿ:
ಜಿಲ್ಲಾ ಪಂಚಾಯತಿ ಕೊಪ್ಪಳ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
SC/ ST ಪ್ರವರ್ಗ-I ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ ಶ್ರೇಣಿ:
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು – 15196.72 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್, ಕೊಪ್ಪಳ ಇವರಿಗೆ 03-04-2024 ರ ಮೊದಲು ಕಳುಹಿಸಬೇಕು.
Koppal Gram Panchayat Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-04-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: koppal.nic.in