ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KPCL Recruitment 2025 ) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPCL Recruitment 2025 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL)
- ವೇತನ ಶ್ರೇಣಿ: 65,000 ರೂ. ತಿಂಗಳಿಗೆ
- ಹುದ್ದೆಗಳ ಸಂಖ್ಯೆ: 02
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಗಳ ವಿವರ:
- ಸಹಾಯಕ ಕಾನೂನು ಅಧಿಕಾರಿ: 02
ಶೈಕ್ಷಣಿಕ ಅರ್ಹತೆ:
KPCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ (LLB) ಪೂರ್ಣಗೊಳಿಸಿರಬೇಕು. ಮತ್ತು ಇತರೆ ಅರ್ಹತೆ ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ.
ವಯೋಮಿತಿ:
KPCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯೋಮಿತಿಯು 40 ವರ್ಷಗಳಾಗಿರಬೇಕು (31-ಮೇ-2025 ರಂತೆ).
ವೇತನ ಶ್ರೇಣಿ:
- ಸಹಾಯಕ ಕಾನೂನು ಅಧಿಕಾರಿ: 65,000 ರೂ. ತಿಂಗಳಿಗೆ (ಆದಾಯ ತೆರಿಗೆ ಕಡಿತಕ್ಕೆ ಒಳಪಟ್ಟಿರುತ್ತದೆ)
ಅರ್ಜಿ ಶುಲ್ಕ:
- SC/ST/PwBD ಅಭ್ಯರ್ಥಿಗಳಿಗೆ: ಶೂನ್ಯ (ಯಾವುದೇ ಶುಲ್ಕವಿಲ್ಲ)
- ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ಶೂನ್ಯ (ಯಾವುದೇ ಶುಲ್ಕವಿಲ್ಲ)
- ಪಾವತಿ ವಿಧಾನ: ಅನ್ವಯವಾಗುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಇ-ಮೇಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಇ-ಮೇಲ್ ಐಡಿ [email protected] 31-ಮೇ-2025 ಕ್ಕೂ ಮುಂಚೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-05-2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-05-2025
ಪ್ರಮುಖ ಲಿಂಕ್‌ಗಳು:
ಇತರೆ ಮಾಹಿತಿಗಳು: