ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ (KPSC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 52,650 ರೂ. ರಿಂದ 97,100 ರೂ.
ಹುದ್ದೆಗಳ ಸಂಖ್ಯೆ: 400
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಪಶುವೈದ್ಯಾಧಿಕಾರಿ – 400 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.V.Sc, B.V.Sc. & AH ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಪಶುವೈದ್ಯಾಧಿಕಾರಿ ಹುದ್ದೆಗಳಿಗೆ 52,650 ರೂ. ರಿಂದ 97,100 ರೂ. ವೇತನ ನೀಡುತ್ತಾರೆ.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
2A, 2B, 3A, 3B, OBC ಅಭ್ಯರ್ಥಿಗಳಿಗೆ: 03 ವರ್ಷ
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
2A, 2B, 3A, 3B, OBC ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
SC/SC (A)/ST: ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-09-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in