ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನೀಯರ್ (ಸಿವಿಲ್) ಮತ್ತು ಗ್ರುಪ್-ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KUWSDB Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
FDA, SDA ಹುದ್ದೆಗಳ ನೇಮಕಾತಿ 2024
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024
KUWSDB Recruitment Notification 2024
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ವೇತನ ಶ್ರೇಣಿ: 43,100 ರೂ. ರಿಂದ 83,900 ರೂ.
ಹುದ್ದೆಗಳ ಸಂಖ್ಯೆ: 64
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಸಹಾಯಕ ಇಂಜಿನಿಯರ್ (ಸಿವಿಲ್) – 50
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) – 14
KUWSDB Recruitment ಶೈಕ್ಷಣಿಕ ಅರ್ಹತೆ:
- ಸಹಾಯಕ ಇಂಜಿನಿಯರ್ (ಸಿವಿಲ್): ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ BE/B.Tech ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು. (ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.)
- ಪ್ರಥಮ ದರ್ಜೆ ಲೆಕ್ಕ ಸಹಾಯಕರು: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.
ವೇತನ ಶ್ರೇಣಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ನಿಯಮಗಳ ಪ್ರಕಾರ ಈ ಕೇಳಗಿನಂತಿದೆ.
- ಸಹಾಯಕ ಇಂಜಿನಿಯರ್ (ಸಿವಿಲ್) – 43,100 ರೂ. ರಿಂದ 83,900 ರೂ.
- ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) – 27,650 ರೂ. ರಿಂದ 52,650 ರೂ.
ವಯೋಮಿತಿ:
ಕನಿಷ್ಟ 18 ವರ್ಷಗಳು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು: 750/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು: 500/-
ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. (ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹೊಂದಿರುವವರು)
KUWSDB Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21/03/2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kea.kar.nic.in