ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (UAS Dharwad Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವಾಕ್-ಇನ್-ಇಂಟರ್ವ್ಯೂ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದಂದು ಇಂಟರ್ವ್ಯೂಗೆ ಹಾಜರಾಗಬೇಕು. ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ. ಇಂಟರ್ವ್ಯೂಗೆ ಹಾಜರಾಗುವ ಮೊದಲು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಮಾತ್ರ ಅರ್ಜಿ ಸಲ್ಲಿಸಿ.
UAS Dharwad Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ವಿಶ್ವ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡ (UAS Dharwad)
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಧಾರವಾಡ – ಕರ್ನಾಟಕ
ಹುದ್ದೆಯ ಹೆಸರು: Project Assistant
ವೇತನ ಶ್ರೇಣಿ: ರೂ.25,000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ:
ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಅಧಿಸೂಚನೆ ಪ್ರಕಾರ ಮಾಸ್ಟರ್ ಡಿಗ್ರಿ ಪೂರೈಸಿರಬೇಕು.
ವಯೋಮಿತಿ:
UAS Dharwad ನಿಯಮಾವಳಿ ಪ್ರಕಾರ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿರುವ ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ಮತ್ತು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 09-10-2025, ಬೆಳಿಗ್ಗೆ 11 ಗಂಟೆಗೆ ಘಂಟೆಗೆ ಕೆಳಗಿನ ಸ್ಥಳದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
ಸಂದರ್ಶನ ಸ್ಥಳ: ಡೀನ್ (ಕೃಷಿ) ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕ
ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ದೃಢೀಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ.
UAS Dharwad Recruitment 2025 ಪ್ರಮುಖ ದಿನಾಂಕಗಳು:
ಅಧಿಸೂಚನೆ ಪ್ರಕಟಿಸಿದ ದಿನಾಂಕ: 23-09-2025
ವಾಕ್-ಇನ್ ಇಂಟರ್ವ್ಯೂ ದಿನಾಂಕ: 09-10-2025 (ಬೆಳಿಗ್ಗೆ 11:00 ಗಂಟೆ)
ಪ್ರಮುಖ ಲಿಂಕ್ಗಳು:
ಅಧಿಸೂಚನೆ & ಅರ್ಜಿ ನಮೂನೆ: ಡೌನ್ಲೋಡ್
ಅಧಿಕೃತ ವೆಬ್ಸೈಟ್: uasd.edu